
ಕಾಸರಗೋಡು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಸಮೀಪ ಆಟೋ ಚಾಲಕ ಪ್ರದೀಪ್(42) ಮತ್ತು 15 ವರ್ಷದ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.
ಪ್ರದೀಪ್ ಅಪ್ರಾಪ್ತೆ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದ. ಇಬ್ಬರೂ ಪ್ರೀತಿಸುತ್ತಿದ್ದರು. ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಫೆಬ್ರವರಿ 11ರಂದು ರಾತ್ರಿ ಕಾಸರಗೋಡು ಜಿಲ್ಲೆ ಮಂಡೆಕಾಪು ಗ್ರಾಮದ ನಿವಾಸಿಗಳಾದ ಪ್ರದೀಪ್ ಮತ್ತು ಅಪ್ರಾಪ್ತ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು ಕುಂಬಳೆ ಪೊಲೀಸರಿಗೆ ಬಾಲಕಿಯ ತಾಯಿ ದೂರು ನೀಡಿದ್ದರು.
ಅವರಿಗೆ ಪೊಲೀಸರು ಹುಡುಕಾಟ ನಡೆಸಿದ್ದರೂ ಇಬ್ಬರು ಪತ್ತೆಯಾಗಿರಲಿಲ್ಲ. ಪೋಷಕರು ಹೈಕೋರ್ಟ್ ಮೊರೆ ಹೋಗಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಹುಡುಕಾಟ ನಡೆಸಿದಾಗ ಆಕೆಶಿಯಾ ಅರಣ್ಯದಲ್ಲಿ ಒಂದೇ ಮರಕ್ಕೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿವೆ.