alex Certify ಬೆಂಗಳೂರು ಜನತೆಗೆ ಮುಖ್ಯ ಮಾಹಿತಿ: ಇಂದು ರಾತ್ರಿಯಿಂದಲೇ ಆಟೋ ಸಂಚಾರ ಬಂದ್: ಮುಷ್ಕರಕ್ಕೆ ಕರೆ ನೀಡಿದ ಚಾಲಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಜನತೆಗೆ ಮುಖ್ಯ ಮಾಹಿತಿ: ಇಂದು ರಾತ್ರಿಯಿಂದಲೇ ಆಟೋ ಸಂಚಾರ ಬಂದ್: ಮುಷ್ಕರಕ್ಕೆ ಕರೆ ನೀಡಿದ ಚಾಲಕರು

ಬೆಂಗಳೂರು: ನಾಳೆ ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದು, ಇಂದು ಮಧ್ಯರಾತ್ರಿ 12 ಗಂಟೆಯಿಂದ ಆಟೋ ಸಂಚಾರ ಸಂಪೂರ್ಣ ಬಂದ್ ಮಾಡಲಾಗುವುದು.

ನಾಳೆ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ನಿರ್ಧರಿಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಆಟೋ ಚಾಲಕರು ಮುತ್ತಿಗೆ ಹಾಕಲಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಕ್ಕೆ ಮೂರು ದಿನ ಗಡುವು ನೀಡಲಾಗಿತ್ತು. ಗಡುವು ಇಂದಿಗೆ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯರಾತ್ರಿ 12 ಗಂಟೆಯಿಂದ ಆಟೋ ಸಂಚಾರ ಸ್ಥಗಿತಗೊಳಿಸಲಾಗುವುದು. ನಾಳೆಯಿಂದ ಆಟೋ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ಕರೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...