
ಬೆಳಗಾವಿ: ಆಟೋ, ಕ್ಯಾಬ್ ಚಾಲಕರಿಗೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಆಯುಷ್ಮಾನ್ ಭಾರತ್ ಯೋಜನೆಯಡಿ ಆಟೋ, ಕ್ಯಾಬ್ ಚಾಲಕರಿಗೆ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಸಚಿವರು ಭರವಸೆ ನೀಡಿದ್ದಾರೆ. ದಾಸರಹಳ್ಳಿ ಶಾಸಕ ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಶ್ರೀರಾಮುಲು, ಆಯುಷ್ಮಾನ್ ಭಾರತ್ ಯೋಜನೆಯಡಿ ಆಟೋ, ಕ್ಯಾಬ್ ಚಾಲಕರಿಗೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ.