
ದಾವಣಗೆರೆ: ಸಾರಿಗೆ ನಿಯಮ ಉಲ್ಲಂಘಿಸಿದ ಆಟೋರಿಕ್ಷಾ ಮೇಲೆ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ.
ನಗರದಲ್ಲಿ ಸಂಚರಿಸುವ ಆಟೋರಿಕ್ಷಾ ಆಸನ ಸಾಮರ್ಥ್ಯಕ್ಕಿಂತ ಅಧಿಕ ಪ್ರಯಾಣಿಕರನ್ನು ಸಾಗಿಸುವುದು, ಮೀಟರ್ ಅಳವಡಿಸದೇ ಇರುವುದು ಅರ್ಹತಾ ಪತ್ರ(ಎಫ್.ಸಿ) ವಿಮೆ ಇಲ್ಲದೇ ನಿಯಮ ಉಲ್ಲಂಘಿಸಿ ಸಂಚರಿಸುತ್ತಿರುವುದನ್ನು ಕಂಡು ಬಂದ ಹಿನ್ನಲೆಯಲ್ಲಿ ನಿರಂತರವಾಗಿ ಪ್ರಕರಣ ದಾಖಲಿಸುವ ಮೂಲಕ ಆಟೋರಿಕ್ಷಾ ಚಾಲಕರಲ್ಲಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ 164 ಆಟೋರಿಕ್ಷಾ ಮೇಲೆ ಪ್ರಕರಣ ದಾಖಲಿಸಿ 2,65,600 ರೂ. ದಂಡದ ಮೊತ್ತವನ್ನು ಸಂಗ್ರಹಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಮುತೇಶ್ ತಿಳಿಸಿದ್ದಾರೆ.