
ಬೆಂಗಳೂರು: ಅಕ್ರಮ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಆಟೋ ಚಾಲಕರ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿವರೆಗೆ ಆಟೋ ಬಂದ್ ಮಾಡಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದ ಸಂಚಾರಕ್ಕೆ ತೊಂದರೆಯಾಗಲಿದೆ.
ಆಟೋ ಬಂದ್ ಆಗುವುದರಿಂದ ಬಿಎಂಟಿಸಿ, ಮೆಟ್ರೋ, ಖಾಸಗಿ ವಾಹನ, ಟ್ಯಾಕ್ಸಿ ಇತರೆ ವಾಹನಗಳನ್ನು ಅವಲಂಬಿಸುವುದು ಅನಿವಾರ್ಯವಾಗಿದೆ. ಸುಮಾರು 2.10 ಲಕ್ಷ ಆಟೋಗಳು ಇಂದು ರಸ್ತೆಗೆ ಇಳಿಯುವುದಿಲ್ಲ. ಸಂಘಟನೆಗಳ ಪ್ರಕಾರ 40 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಪ್ರತಿದಿನ ಆಟೋದಲ್ಲಿ ಸಂಚರಿಸಲಿದ್ದು, ಮುಷ್ಕರದಿಂದ ತೊಂದರೆಯಾಗುವ ಸಾಧ್ಯತೆ ಇದೆ.
ಸುಮಾರು 21 ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಿವೆ. ಆಪ್ ಆಧಾರಿತ ಅನಧಿಕೃತ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಟೋ ಚಾಲಕರು ಮುಷ್ಕರ ಕೈಗೊಂಡಿದ್ದು, ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಿದ್ದಾರೆ.