alex Certify ನಟಿ ‘ಅಭಿನಯ ಶಾರದೆ’ ಜಯಂತಿ ಹೆಸರಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ಧರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ‘ಅಭಿನಯ ಶಾರದೆ’ ಜಯಂತಿ ಹೆಸರಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ “ಅಭಿನಯ ಶಾರದೆ ಜಯಂತಿ” ಅವರ ಜೀವನಗಾಥೆ “Lovely But lonely” ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ ಹೀರೋ ಅಂತ ಕರಿಯುತ್ತಿದ್ದರು. ಜಯಂತಿ ಅವರು ಅಪಾರ ಮನುಷ್ಯತ್ವ ಹೊಂದಿದ್ದ ಸ್ನೇಹಜೀವಿ ಆಗಿದ್ದರು. ಕಲಾವಿದೆಯಾಗಿ ಜಯಂತಿಗೆ ಜಯಂತಿಯವರೇ ಸಾಟಿ ಆಗಿದ್ದರು. ಅವರು ಮಾನವೀಯವಾಗಿ ಬದುಕನ್ನು ನಡೆಸಿ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ ಎಂದರು.

ನನ್ನ ಮತ್ತು ಜಯಂತಿ ಅವರ ರಾಜಕೀಯ ಮೌಲ್ಯಗಳು ಒಂದೇ ಆಗಿದ್ದವು. ಅವರು ಸಮಾಜ ಪ್ರೇಮಿ, ಮಾನವೀಯತೆಯ ಪ್ರೇಮಿ ಆಗಿದ್ದರು ಎಂದು ಸಿಎಂ ಹೇಳಿದ್ದಾರೆ. ವಿಶ್ವದ ಯಾವುದೇ ಭಾಷೆಯ ಸಿನಿಮಾಗಳಿಗಿಂತ ಕನ್ನಡ ಭಾಷೆ ಸಿನಿಮಾಗಳು ಒಳ್ಳೆ ಗುಣಮಟ್ಟ ಕಾಯ್ದುಕೊಂಡಿ

ವೆ. ನಾನು ಸದಾ ನಮ್ಮ ಕನ್ನಡ ಚಿತ್ರರಂಗದ ಪ್ರೋತ್ಸಾಹಕ್ಕೆ ನಿಲ್ಲುತ್ತೇನೆ. ಕನ್ನಡ ಸಿನಿಮಾಗಳಿಗೆ 100% ತೆರಿಗೆ ವಿನಾಯ್ತಿ ಘೋಷಿಸಿದ್ದು ನಾನೇ. ಪಿ.ಲಂಕೇಶ್ ಅವರು ನನಗೆ ಗುರುಗಳ ರೀತಿ. ಪತ್ರಿಕೆ ಕಚೇರಿಗೆ ಹೋಗಿ ಮಾರ್ಗದರ್ಶನ ಪಡೆಯುತ್ತಿದ್ದೆ ಎಂದು ತಿಳಿಸಿದ್ದಾರೆ.

ನಟ ರಮೇಶ್ ಅರವಿಂದ್, ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್, ನಿರ್ದೇಶಕಿ ಕವಿತಾ ಲಂಕೇಶ್, ಹಿರಿಯ ಪತ್ರಕರ್ತ ಸಮೀವುಲ್ಲಾ, ಜಯಂತಿ ಅವರ ಪುತ್ರ ಕೃಷ್ಣಕುಮಾರ್ ಮತ್ತು ಕೃತಿಯ ಲೇಖಕರಾದ ಸದಾಶಿವ ಶೆಣೈ, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...