alex Certify ‘ದ್ವಿತೀಯ PUC’ ವಾರ್ಷಿಕ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ‘BGS’ ವಿದ್ಯಾರ್ಥಿಗಳಿಗೆ ಸನ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ದ್ವಿತೀಯ PUC’ ವಾರ್ಷಿಕ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ‘BGS’ ವಿದ್ಯಾರ್ಥಿಗಳಿಗೆ ಸನ್ಮಾನ

ಚಿಕ್ಕಮಗಳೂರು : ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದ ಬಿಜಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಅಮರ್ತ್ಯ ಸೇನ್ ಅರ್ಥಶಾಸ್ತ್ರ ವೇದಿಕೆಯ ಸಮಾರೋಪ ಸಮಾರಂಭವು ದಿನಾಂಕ 24 12 204 ರಂದು ಕಾಲೇಜಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಳೆದ ಬಾರಿಯ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಹಾಗೂ ದೀಕ್ಷಿತ ಡಿ ಈ ಇಬ್ಬರು ವಿದ್ಯಾರ್ಥಿನಿಯರನ್ನು ಅವರ ಪೋಷಕರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಹಾಗೆಯೇ ಸತತವಾಗಿ ಎರಡು ವರ್ಷಗಳ ಕಾಲ ಕಳೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ತೇಜಸ್ ಗೆ ರಾವ್ ಇವರನ್ನು ಸಹ ಸನ್ಮಾನಿಸಲಾಯಿತು ಹಾಗೂ ಈ ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಆಗಮಿಸಿದ ಹೇರೂರು ಪ್ರೌಢಶಾಲೆಯ ದೈಹಿಕ ಶಿಕ್ಷಕಿಯಾದ ಉಷಾ ಪಿ ಜಿ ಇವರು ವಿದ್ಯಾರ್ಥಿಗಳು ಹಾಗೂ ಪೋಷಕರ ಮನಮುಟ್ಟುವಂತೆ ತನ್ನ ಭಾಷಣದಲ್ಲಿ ಮಾತನಾಡಿದರು ಈ ಕಾರ್ಯಕ್ರಮವನ್ನು ಅರ್ಥಶಾಸ್ತ್ರ ಉಪನ್ಯಾಸಕರಾದ ಪ್ರಮೋದ್ ಕುಮಾರ್ ಸಿ ಇವರು ಆಯೋಜಿಸಿದ್ದು ಎಲ್ಲಾ ಉಪನ್ಯಾಸಕ ವರ್ಗದವರು, ಪ್ರಾಂಶುಪಾಲರಾದಂತಹ ಮುರುಳಿಧರ್ ಎಂ ಆರ್, ಹಿರಿಯ ಉಪನ್ಯಾಸಕಿಯಾದ ಗಾಯತ್ರಿದೇವಿ ಹಾಗೂ ಪದವಿ ಕಾಲೇಜಿನ ಪ್ರಾಚಾರ್ಯರಾದ ಮುಸ್ತಾಕ್ ಅಹಮದ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ವಹಿಸಿಕೊಂಡಿದ್ದು ದೀಕ್ಷಿತ ಹಾಗೂ ಸ್ವಪ್ನ ಪ್ರಾರ್ಥನೆಯನ್ನು, ವೈಷ್ಣವಿ ಕಾರ್ಯಕ್ರಮದ ಸ್ವಾಗತವನ್ನು, ಅನನ್ಯ ವಂದನಾರ್ಪಣೆಯನ್ನು ಮತ್ತು ತ್ರಿಶಾ ಹಾಗೂ ಶಬರಿ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...