alex Certify BREAKING : ‘ಮಹಿಳೆ ಕಿಡ್ನ್ಯಾಪ್’ ಪ್ರಕರಣ : ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ‘SIT’ ವಶಕ್ಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಮಹಿಳೆ ಕಿಡ್ನ್ಯಾಪ್’ ಪ್ರಕರಣ : ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ‘SIT’ ವಶಕ್ಕೆ..!

ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಅವರನ್ನು ಎಸ್ ಐ ಟಿ ವಶಕ್ಕೆ ಪಡೆದಿದೆ.

ಚಿಕ್ಕಮಗಳೂರಿನ ಸಂಬಂಧಿಕರ ಮನೆಯಲ್ಲಿದ್ದ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ರನ್ನು ಎಸ್ ಐ ಟಿ ಅಧಿಕಾರಿಗಳು ನಿನ್ನೆ ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಭವಾನಿ ರೇವಣ್ಣಗೆ ಇಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು, ಈ ಬೆನ್ನಲ್ಲೇ ಎಸ್ ಐ ಟಿ ವಿಚಾರಣೆಗೆ ಹಾಜರಾಗಿದ್ದಾರೆ.ವಕೀಲರ ಜೊತೆ ಬಂದ ಭವಾನಿ ರೇವಣ್ಣ ಎಸ್ ಐ ಟಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿತ್ತು. 15 ದಿನಗಳಿಂದ ನಾಪತ್ತೆಯಾಗಿರುವ ಭವಾನಿ ರೇವಣ್ಣ ಅವರ ಬಂಧನಕ್ಕೆ ಎಸ್ಐಟಿ ತೀವ್ರ ಶೋಧ ನಡೆಸಿದ್ದು, ಸುಳಿವು ಸಿಕ್ಕಿರಲಿಲ್ಲ. ಅಲ್ಲದೇ ಅವರ ವಿರುದ್ಧ ಕೋರ್ಟ್ ವಾರಂಟ್ ಜಾರಿಗೊಳಿಸಿತ್ತು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...