
ಬ್ಯಾಂಕ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ದೆಹಲಿಯ ಧರಿಯಾಗಂಜ್ ಪ್ರದೇಶದಲ್ಲಿ ನಡೆದಿದೆ.
ಇಲ್ಲಿನ ಆಕ್ಸಿಸ್ ಬ್ಯಾಂಕ್ ನಲ್ಲಿ ಬೆಂಕಿ ಅವಘಡ ಸಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಆದರೆ ಹಾನಿ ಪ್ರಮಾಣದ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.