alex Certify ಇಬ್ಬರು ಎಂಎಲ್‌ಸಿಗಳ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿಜೆಪಿಗೆ ಮತ್ತೆ ಶಾಕ್: ‘ಕೈ’ ಹಿಡಿಯಲಿದ್ದಾರೆ ಮತ್ತಿಬ್ಬರು ಬಿಜೆಪಿ ಶಾಸಕರು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ಬರು ಎಂಎಲ್‌ಸಿಗಳ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿಜೆಪಿಗೆ ಮತ್ತೆ ಶಾಕ್: ‘ಕೈ’ ಹಿಡಿಯಲಿದ್ದಾರೆ ಮತ್ತಿಬ್ಬರು ಬಿಜೆಪಿ ಶಾಸಕರು…?

ವಿಧಾನಸಭೆ ಚುನಾವಣೆ ಹೊತ್ತಲ್ಲಿ ನಿರೀಕ್ಷೆಯಂತೆ ಪಕ್ಷಾಂತರ ಪರ್ವ ಜೋರಾಗಿ ನಡೆಯುತ್ತಿದೆ. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ಹಾಗೂ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಜ್ಜಾಗಿದ್ದಾರೆ.

ಬಿಜೆಪಿಯ ಮತ್ತಿಬ್ಬರು ವಿಧಾನ ಪರಿಷತ್ ಸದಸ್ಯರು ಕೈ ಹಿಡಿಯಲು ಸಜ್ಜಾಗಿದ್ದಾರೆ. ಬಿಜೆಪಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಮೊದಲು ಬಿಜೆಪಿಯಲ್ಲಿದ್ದ ಆಯನೂರು ಮಂಜುನಾಥ್ ಜನತಾ ಪಕ್ಷ, ನಂತರ ಕಾಂಗ್ರೆಸ್ ಪಕ್ಷ ಬಳಿಕ ಬಿಜೆಪಿಗೆ ಮರಳಿದ್ದರು. ಈಗ ಮತ್ತೆ ಅವರು ಕಾಂಗ್ರೆಸ್ ಸೇರ್ಪಡೆಯಾಗಿ ಶಿವಮೊಗ್ಗ ನಗರದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್. ಶಂಕರ್ ಕೂಡ ಕಾಂಗ್ರೆಸ್ ಸೇರಲು ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...