
ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು ಮಧ್ಯಾಹ್ನ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾಳೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಇಂದು ಮಧ್ಯಾಹ್ನ ಸಭಾಪತಿ ಭೇಟಿ ಮಾಡಿ ರಾಜೀನಾಮೆ ಸಲ್ಲಿಸುತ್ತೇನೆ. ನಾಳೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.