
ಧಾರವಾಡ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಧಾರವಾಡದಿಂದ ಭಕ್ತರನ್ನು ಕರೆದೊಯ್ಯಲಾಗುವುದು.
ಅಯೋಧ್ಯೆಗೆ 10 ಕೋಟಿ ಜನರಿಗೆ ಆಹ್ವಾನ ನೀಡಲಾಗಿದೆ. ಧಾರವಾಡದಿಂದ ಅಯೋಧ್ಯೆಗೆ ವಿಶೇಷ ರೈಲು ತೆರಳಲಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸೂಚನೆಯಂತೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಎರಡು ದಿನ ಮೊದಲು ಧಾರವಾಡದಿಂದ ವಿಶೇಷ ರೈಲು ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ.
ಜನವರಿ 22ರಂದು ಶ್ರೀರಾಮ ಮಂದಿರ ಉದ್ಘಾಟನೆ ನೆರವೇರಲಿದ್ದು, ಇದೇ ಸಂದರ್ಭದಲ್ಲಿ ಭಕ್ತರು ತೆರಳಲು ಅನುಕೂಲವಾಗುವಂತೆ ಧಾರವಾಡದಿಂದ ವಿಶೇಷ ರೈಲು ಬಿಡಲು ಯೋಜನೆ ರೂಪಿಸಲಾಗುತ್ತಿದೆ. ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಿ ಮನವಿ ಮಾಡಲಾಗಿದೆ.
ಎರಡು ದಿನ ಮೊದಲು ಧಾರವಾಡದಿಂದ ಹೊರಡಲಿರುವ ಭಕ್ತರು ಸುತ್ತಮುತ್ತಲಿನ ಪ್ರದೇಶಗಳ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸಾಗಲಿದ್ದಾರೆ ಎನ್ನಲಾಗಿದೆ.