ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ತೆರಳುವ ಕರ್ನಾಟಕದ ಭಕ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಮುಜರಾಯಿ ಇಲಾಖೆಯಿಂದ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುವುದು.
ಈ ಸಂಬಂಧ ಜಮೀನು ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಲು ಮುಜರಾಯಿ ಇಲಾಖೆ ನಿಯೋಗ ತೆರಳಲಿದೆ. ಅಯೋಧ್ಯೆಯಲ್ಲಿ ಕರ್ನಾಟಕ ಭವನ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದು 5 ಎಕರೆ ಜಾಗ ಕೇಳಲಾಗಿದೆ. ಜಾಗ ಮಂಜೂರಾದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಭವನ ನಿರ್ಮಾಣಕ್ಕಾಗಿ ಬಜೆಟ್ ನಲ್ಲಿ ಅನುದಾನ ಮೀಸಲಿಡಲು ಕೋರಲಾಗಿದೆ.
ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ತಿರುಪತಿ ಸೇರಿ ವಿವಿಧೆಡೆ ಅತಿಥಿ ಗೃಹ ನಿರ್ಮಿಸಲಾಗಿದ್ದು, ಈ ಮಾದರಿಯಲ್ಲಿ ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಿಸಲು ಯೋಜಿಸಲಾಗಿದೆ.