ಕಲಬುರಗಿ: ಅಯೋಧ್ಯೆಯಲ್ಲಿ ಕರ್ನಾಟಕ ಭವನ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ 4 ಎಕರೆ ಜಮೀನು ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದ್ದು, ಅಲ್ಲಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಕನ್ನಡಿಗರು ಅಯೋಧ್ಯೆಗೆ ಹೋದಾಗ ಉಳಿದುಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಭವನ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಕೂಡ ಪತ್ರ ಬರೆದಿತ್ತು. ಈಗ ನಾನು ಕೂಡ ಜಮೀನು ನೀಡುವಂತೆ ಕೋರಿ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದ್ದು, ಶೀಘ್ರವೇ ಜಮೀನು ನೀಡಲಿದ್ದಾರೆ. ಜಮೀನು ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕರ್ನಾಟಕ ಭವನ ನಿರ್ಮಾಣ ಕಾರ್ಯ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.