alex Certify BIG NEWS: ರಾಜ್ಯದಿಂದ ಅಯೋಧ್ಯೆಗೆ 35,000ಕ್ಕೂ ಹೆಚ್ಚು ಭಕ್ತರ ಪ್ರಯಾಣ; ಬಿ.ವೈ.ವಿಜಯೇಂದ್ರ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಿಂದ ಅಯೋಧ್ಯೆಗೆ 35,000ಕ್ಕೂ ಹೆಚ್ಚು ಭಕ್ತರ ಪ್ರಯಾಣ; ಬಿ.ವೈ.ವಿಜಯೇಂದ್ರ ಮಾಹಿತಿ

ಬೆಂಗಳೂರು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಕೇವಲ ಒಂದು ದಿನ ಮಾತ್ರ ಬಾಕಿ ಇದೆ. ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಅಂದು ಭದ್ರತೆಯ ಕಾರಣಕ್ಕಾಗಿ ಕೆಲವರಿಗೆ ಮಾತ್ರ ಆಹ್ವಾನವಿದೆ. ಜನವರಿ 22ರ ಬಳಿಕ ರಾಮ ಮಂದಿರಕ್ಕೆ ಭೇಟಿ ನೀಡಲು ಭಕ್ತರಿಗೆ, ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ.

ಜನವರಿ 22ರ ಬಳಿಕ 60 ದಿನಗಳ ಅವಧಿಯಲ್ಲಿ 35 ಸಾವಿರಕ್ಕೂ ಹೆಚ್ಚು ರಾಮ ಭಕ್ತರು ಕರ್ನಾಟಕದಿಂದ ಅಯೋಧ್ಯೆಗೆ ತೆರಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಜನವರಿ 31ರಿಂದ ಮಾರ್ಚ್ 25ರವರೆಗೆ ರಾಮ ಭಕ್ತರು ಅಯೋಧ್ಯೆಗೆ ತೆರಳಲಿದ್ದು, ಪ್ರಯಾಣದ ಖರ್ಚು, ವೆಚ್ಚಗಳನ್ನು ಅವರೇ ಭರಿಸಲಿದ್ದಾರೆ. ಒಟ್ಟು 25 ರೈಲುಗಳ ಮೂಲಕ ಪ್ರಯಾಣ ಮಾಡಲಿದ್ದು, ಪ್ರತಿ ರೈಲಿನಲ್ಲಿ 1500 ಜನರು ಪ್ರಯಾಣಿಸಲಿದ್ದಾರೆ. ರಾಮ ಭಕ್ತರ ಉತ್ಸಾಹಕ್ಕೆ ಅಡ್ಡಿಯಾಗದಂತೆ ರಾಜ್ಯ ಸರ್ಕಾರ ಸಹಕಾರ ನೀಡಬೇಕು ಎಂದು ತಿಳಿಸಿದ್ದಾರೆ.

ರಾಜ್ಯದ 60ಕ್ಕೂ ಹೆಚ್ಚು ಪಿವಿಆರ್ ಗಳಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನೇರ ಪ್ರಸಾರ ಇರಲಿದೆ. ಮಂತ್ರಾಕ್ಷತೆ ವಿತರಣೆಗೆ ಜನರಿಂದ ನಿರೀಕ್ಷೆಗೂ ಮೀರಿ ಸ್ಪಂದನೆ ಸಿಕ್ಕಿದೆ ಎಂದು ವಿಜಯೇಂದ್ರ ವಿವರಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...