
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದ್ದು, ಉದ್ಘಾಟನೆಗೆ ಮೂರು ದಿನಗಳು ಮಾತ್ರ ಬಾಕಿ ಇದೆ. ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಲಿದೆ.
ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಕೆಲ ರಾಜ್ಯಗಳಲ್ಲಿ ಸಾರ್ವಜನಿಕ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಗೋವಾ, ಛತ್ತೀಸ್ ಗಢ, ಹರ್ಯಾಣಾ ರಾಜ್ಯಗಳಲ್ಲಿ ರಜೆ ಘೋಷಿಸಲಾಗಿದೆ.
ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನದಂತೆ ಜನವರಿ 22ರಂದು ಉತ್ತರ ಪ್ರದೇಶದ ಶಿಕ್ಷಣ ಸಂಸ್ಥೆಗಳು ರಾಮ ಮಂದಿರ ಪ್ರಾಣ ಪ್ರತಿಷ್ಹೆ ಸಮಾರಂಭ ಹಿನ್ನೆಲೆಯಲ್ಲಿ ಮುಚ್ಚಿರಲಿವೆ. ಅಲ್ಲದೇ ರಾಜ್ಯಾದ್ಯಂತ ಮದ್ಯದಂಗಡಿಗಳು ಬಂದ್ ಆಗಲಿವೆ.
ಮಧ್ಯಪ್ರದೇಶದಲ್ಲಿ ಸಿಎಂ ಮೋಹನ್ ಯಾದವ್ ಜ.22ರಂದು ರಾಜ್ಯದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಈ ದಿನವನ್ನು ಜನರು ಹಬ್ಬದಂತೆ ಆಚರಿಸಲು ಸೂಚಿಸಿದ್ದಾರೆ.
ಗೋವಾ ಸರ್ಕಾರ ಕೂಡ ಜನವರಿ 22ರಂದು ಸರ್ಕಾರಿ ನೌಕರರಿಗೆ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಛತ್ತೀಸ್ ಗಢ, ಹರ್ಯಾಣ ರಾಜ್ಯಗಲಲ್ಲಿಜೂ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.