ಅಯೋಧ್ಯೆ: ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಕೆಲವೇ ಹೊತ್ತಲ್ಲಿ ಕೋಟ್ಯಂತರ ಭಾರತೀಯರ ಶತಮಾನಗಳ ಕನಸು ನನಸಾಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಇಡೀ ದೇಶದ ಜನತೆ ಕಾಯುತ್ತಿದ್ದಾರೆ. ಅಯೋಧ್ಯೆ ರಾಮ ಮಂದಿರದಲ್ಲಿ ನಡೆಯಲಿರುವ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುತ್ತಿಲ್ಲ ಎನ್ನಲಾಗಿದೆ.
ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 7 ಸಾವಿರಕ್ಕೂ ಹೆಚ್ಚು ಗಣ್ಯರು ಅಯೋಧ್ಯೆಗೆ ಆಗಮಿಸಿದ್ದಾರೆ. ಬಿಜೆಪಿಯ ಹಲವು ಹಿರಿಯ ನಾಯಕರು ಅಯೋಧ್ಯೆಗೆ ಆಗಮಿಸಿದ್ದಾರೆ. ಇನ್ನು ಹಲವು ನಾಯಕರು ವಿವಿಧ ದೇವಾಲಯಗಳಿಂದ ರಾಮಲಲ್ಲಾ ಪ್ರಾಣ ಪ್ರತಿಷ್ಥಾಪನೆ ಕಾರ್ಯಕ್ರಮ ವೀಕ್ಷಿಸಲಿದ್ದಾರೆ.
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಕೂಡ ಶೀತ ಗಾಳಿ ಹಿನ್ನೆಲೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಕ್ಕೆ ಗೈರಾಗಿದ್ದಾರೆ. ಈ ನಡುವೆ ಗೃಹ ಸಚಿವ ಅಮಿತ್ ಶಾ ಕೂಡ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿಲ್ಲ, ಗೈರಾಗಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಅಮಿತ್ ಶಾ ಅವರು ಕುಟುಂಬದೊಂದಿದೆ ಬಿರ್ಲಾ ಮಂದಿರದಲ್ಲಿ ಉಪಸ್ಥಿತರಿರಲಿದ್ದು ಸುಮಾರು ಮೂರು ಗಂಟೆಗಳ ಕಾಲ ಲೈವ್ ಸ್ಟ್ರೀಮಿಂಗ್ ವೀಕ್ಷಿಸಲಿದ್ದಾರೆ ಎಂದು ತಿಳಿದುಬಂದಿದೆ.