ಬೆಂಗಳೂರು: ಗುತ್ತಿಗೆ ಆಯುಷ್ ವೈದ್ಯರ ಮರು ನೇಮಕಾತಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಬಗ್ಗೆ ಮಾತನಾಡಿ, ಕೆಲಸ ಕಳೆದುಕೊಂಡ ಆಯುಷ್ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಮರು ನೇಮಕಾತಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.
10 ವರ್ಷಗಳಿಗೂ ಹೆಚ್ಚು ಕಾಲ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿರುವ ಆಯುಷ್ ವೈದ್ಯರನ್ನು ಮಾನವೀಯತೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹಿಂದಿನಂತೆಯೇ ಗುತ್ತಿಗೆ ಆಧಾರದ ಮೇಲೆ ಆಯುಷ್ ವೈದ್ಯರು ಕಾರ್ಯನಿರ್ವಹಿಸಲಿದ್ದಾರೆ. ಈ ಕುರಿತಂತೆ ಕರಡು ಸಿದ್ಧಪಡಿಸಲಾಗಿದ್ದು, ಸಂಪುಟ, ಹಣಕಾಸು ಇಲಾಖೆ ಒಪ್ಪಿಗೆ ಪಡೆದು ನೇಮಕಾತಿಗೆ ಚಾಲನೆ ನೀಡಲಾಗುವುದು ಎಂದು ಹೇಳಲಾಗಿದೆ.