ನ್ಯಾಷನಲ್ ಡಿಜಿಟಲ್ ಹೆಲ್ತ್ ಕಾರ್ಡ್, ಭಾರತ ಸರ್ಕಾರದ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ನ ಭಾಗವಾಗಿದೆ. ಆದ್ರೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಹಾಗೂ ಡಿಜಿಟಲ್ ಹೆಲ್ತ್ ಕಾರ್ಡ್ ಎರಡಕ್ಕೂ ವ್ಯತ್ಯಾಸವಿದೆ. ಡಿಜಿಟಲ್ ಹೆಲ್ತ್ ಕಾರ್ಡನ್ನು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ನೊಂದಿಗೆ ನೇರವಾಗಿ ಲಿಂಕ್ ಮಾಡಬಾರದು.
ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಪ್ರತ್ಯೇಕ ಆರೋಗ್ಯ ಕಾರ್ಡ್ ಆಗಿದೆ. ಇದರಲ್ಲಿ ದೇಶದ ಬಡ ಕುಟುಂಬಗಳಿಗೆ 5 ಲಕ್ಷ ರೂಪಾಯಿಗಳ ಆರೋಗ್ಯ ವಿಮೆಯನ್ನು ನೀಡಲಾಗುತ್ತದೆ. ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ಡಿಜಿಟಲ್ ಆರೋಗ್ಯ ಕಾರ್ಡ್‌ಗಿಂತ ಸಂಪೂರ್ಣ ಭಿನ್ನವಾಗಿದೆ. ಡಿಜಿಟಲ್ ಆರೋಗ್ಯ ಕಾರ್ಡ್ ನಲ್ಲಿ ಅನಾರೋಗ್ಯಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ವೈದ್ಯಕೀಯ ವರದಿಗಳು ಸಿಗಲಿವೆ.
ದೇಶದಲ್ಲಿ ಸುಮಾರು 16.15 ಕೋಟಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳನ್ನು ನೀಡಲಾಗಿದೆ. ಡಿಜಿಟಲ್ ಆರೋಗ್ಯ ಕಾರ್ಡ್ ಈಗಷ್ಟೇ ಆರಂಭವಾಗಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ನ ಪ್ರಯೋಜನವನ್ನು ಪಡೆಯುವ ಜನರು ಡಿಜಿಟಲ್ ಆರೋಗ್ಯ ಕಾರ್ಡ್ ಸಹ ಪಡೆಯಬಹುದು.
ಅಮೆರಿಕಾ, ಬ್ರಿಟನ್, ಫ್ರಾನ್ಸ್, ಜರ್ಮನಿ, ಡೆನ್ಮಾರ್ಕ್ ಸೇರಿದಂತೆ ವಿಶ್ವದ ಅನೇಕ ದೇಶಗಳಲ್ಲಿ ಈಗಾಗಲೇ ಡಿಜಿಟಲ್ ಹೆಲ್ತ್ ಕಾರ್ಡ್ ಜಾರಿಯಲ್ಲಿದೆ. ಆಯುಷ್ಮಾನ್ ಭಾರತ್ ಗೋಲ್ಡನ್ ಕಾರ್ಡ್ ತಯಾರಿಸಲು, ಭಾರತ ಸರ್ಕಾರ ಆನ್‌ಲೈನ್ ನೋಂದಣಿಯ ಪ್ರಕ್ರಿಯೆಯನ್ನು ಆರಂಭಿಸಿದೆ. ಯಾವುದೇ ವ್ಯಕ್ತಿ, ಈ ಕಾರ್ಡ್ ಪಡೆಯಬಹುದು.