
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಆಯುಷ್ಮಾನ್ ಗುರುತಿನ ಚೀಟಿಯ ಎಲ್ಲಾ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.
ಯೋಜನೆಯ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್ ವಿತರಣೆ ಸೇರಿದಂತೆ ಎಲ್ಲಾ ಚಟುವಟಿಕೆಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ರಂದೀಪ್ ಡಿ. ಅವರು ಸುತ್ತೋಲೆ ಹೊರಡಿಸಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.