ಬೆಂಗಳೂರು: ಆಯುಷ್ಮಾನ್ ಭಾರತ್ ಯೋಜನೆಯಡಿ ಆರು ತಿಂಗಳಲ್ಲಿ ಪ್ರತಿ ಪಂಚಾಯತಿಯಲ್ಲಿ ಕಾರ್ಡ್ ನೀಡಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಆಯುಷ್ಮಾನ್ ಭಾರತ್ ದಿನದ ಅಂಗವಾಗಿ ನಡೆದ ಆರೋಗ್ಯ ಮಂಥನ ವರ್ಚುಯಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಯುಷ್ಮಾನ್ ಭಾರತ್ ಯೋಜನೆಯಡಿ ರಾಜ್ಯದ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಆರು ತಿಂಗಳಲ್ಲಿ ಎಲ್ಲರಿಗೂ ಆರೋಗ್ಯ ಕಾರ್ಡುಗಳು ದೊರೆಯುವಂತೆ ಮಾಡಬೇಕು ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರು ಆಯುಷ್ಮಾನ್ ಯೋಜನೆ ಮೂಲಕ ಜನರಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಿದ್ದಾರೆ. ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಆರು ತಿಂಗಳಲ್ಲಿ ಪ್ರತಿ ಪಂಚಾಯಿತಿಯಲ್ಲಿ ಎಲ್ಲರಿಗೂ ಎಲ್ಲರಿಗೂ ಆಯುಷ್ಮಾನ್ ಆರೋಗ್ಯ ಕಾರ್ಡ್ ದೊರೆಯುವಂತಾಗಬೇಕೆಂದು ತಿಳಿಸಿದ್ದಾರೆ.