alex Certify ಗುಡ್ ನ್ಯೂಸ್: ಕೋವಿಡ್ ರೋಗಿಗಳಿಗೆ ‘ಆಯುಷ್ಮಾನ್ ಭಾರತ್’ ಯೋಜನೆಯಡಿ ಚಿಕಿತ್ಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಕೋವಿಡ್ ರೋಗಿಗಳಿಗೆ ‘ಆಯುಷ್ಮಾನ್ ಭಾರತ್’ ಯೋಜನೆಯಡಿ ಚಿಕಿತ್ಸೆ

ಶಿವಮೊಗ್ಗ: ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದೆ. ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ ಆಸ್ಪತ್ರೆಗಳು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮನವಿ ಮಾಡಿದ್ದಾರೆ.

ಯೋಜನೆಯಡಿ ರೆಫರಲ್ ಮೂಲಕ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಕೋವಿಡ್ ರೋಗಿಗಳ ವೆಚ್ಚವನ್ನು ಸರ್ಕಾರ ಭರಿಸಲಿದೆ. ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಉಚಿತವಾಗಿ ಒದಗಿಸಲಾಗುತ್ತದೆ. ಒಂದೊಮ್ಮೆ ಕೋವಿಡ್ ರೋಗಿಗಳು ತಮ್ಮ ಇಚ್ಚಾನುಸಾರ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ ಸರ್ಕಾರ ನಿಗದಿಪಡಿಸಿರುವ ಈ ಕೆಳಕಂಡ ಮೊತ್ತವನ್ನು ರೋಗಿಗಳೇ ನೇರವಾಗಿ ಭರಿಸಬೇಕಾಗುತ್ತದೆ. ಜನರಲ್ ವಾರ್ಡ್ 10 ಸಾವಿರ ರೂ, ಹೆಚ್‍ಡಿಯು 12 ಸಾವಿರ ರೂ, ಐಸೊಲೇಷನ್ ಐಸಿಯು ವೆಂಟಿಲೇಟರ್ ಇಲ್ಲದೆ 15 ಸಾವಿರ ರೂ, ವಿತ್ ವೆಂಟಿಲೇಟರ್ ರೂ. 25 ಸಾವಿರ ರೂ. ದರಗಳ ಮಿತಿ ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ ಅಥವಾ ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಸರ್ಕಾರ ನಿಗದಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರ ವಿಧಿಸಿದರೆ 1800 425 8330 ಗೆ ಹಾಗೂ 1912 ಕರೆ ಮಾಡಿ ದೂರು ನೀಡಬಹುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...