alex Certify ಮಕರಜ್ಯೋತಿ ದರ್ಶನವಾಗುತ್ತಿದ್ದಂತೆ ಮುಗಿಲು ಮುಟ್ಟಿದ ಅಯ್ಯಪ್ಪನ ಸ್ಮರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕರಜ್ಯೋತಿ ದರ್ಶನವಾಗುತ್ತಿದ್ದಂತೆ ಮುಗಿಲು ಮುಟ್ಟಿದ ಅಯ್ಯಪ್ಪನ ಸ್ಮರಣೆ

ಕೇರಳದ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ. ಮಕರ ಸಂಕ್ರಾಂತಿ ಅಂಗವಾಗಿ ಇಂದು ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರಜ್ಯೋತಿಯ ದರ್ಶನವಾಗಿದೆ. ಅಯ್ಯಪ್ಪಸ್ವಾಮಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಗಿದೆ. ಅಪಾರ ಸಂಖ್ಯೆಯ ಭಕ್ತರು ಮಕರ ಜ್ಯೋತಿಯ ದರ್ಶನ ಪಡೆದಿದ್ದಾರೆ. ಸ್ವಾಮಿಯೇ ಶರಣಮಯ್ಯಪ್ಪ ಘೋಷಣೆ ಮುಗಿಲು ಮುಟ್ಟಿದೆ.

ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾಂತಿ ಉತ್ಸವದಲ್ಲಿ ಕೋವಿಡ್ ನಡುವೆಯೂ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಗರುಡ ದರ್ಶನ ಪಡೆದು ಮಕರಜ್ಯೋತಿ ಕಣ್ತುಂಬಿಕೊಂಡ ಭಕ್ತರು ಪುನೀತರಾಗಿದ್ದಾರೆ. ಶಬರಿಗಿರಿಯಲ್ಲಿ ಮಕರಜ್ಯೋತಿ ದರ್ಶನವಾಗುತ್ತಿದ್ದಂತೆ ಅಯ್ಯಪ್ಪನ ಸ್ಮರಣೆ ಮುಗಿಲು ಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...