ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ.
ಹೈಕೋರ್ಟ್ ಏಕಸದಸ್ಯಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿರುವ ವಿಭಾಗೀಯ ಪೀಠ, ಬಿ.ಕಾಂ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಸೋಮವಾರ ಬಿ.ಕಾಂ 1, 3 ಹಾಗೂ 5ನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯಲಿವೆ.
ಸಿಎ ಫೌಂದೇಶನ್ ಪರೀಕ್ಷೆ ಕೂಡ ಸೋಮವಾರವೇ ನಡೆಯಲಿದ್ದ ಕಾರಣಕ್ಕೆ ಬಿ.ಕಾಂ ಪರೀಕ್ಷೆಯನ್ನು ಮುಂದೂಡಿ ಹೈಕೋರ್ಟ್ ಏಕಸದಸ್ಯಪೀಠ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಬೆಂಗಳೂರು ವಿಶ್ವವಿದ್ಯಾಲಯ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು. ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ನಾಳೆ ಬಿ.ಕಾಂ ಪರೀಕ್ಷೆಗಳಿಗೆ ಅನುಮತಿ ನೀಡಿದೆ.