alex Certify BIG NEWS: ಬಿ.ಎಡ್. ಪ್ರವೇಶ ನೋಂದಣಿ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ಎಡ್. ಪ್ರವೇಶ ನೋಂದಣಿ ಅವಧಿ ವಿಸ್ತರಣೆ

ಬೆಳಗಾವಿ: ಬಿ.ಎಡ್.ಪದವಿ ಪ್ರವೇಶ ನೋಂದಣಿ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳ ಫಲಿತಾಂಶ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಬಿ.ಎಡ್. ಪ್ರವೇಶ ನೋಂದಣಿ ಕೊನೆಯ ದಿನ ಮುಕ್ತಾಯವಾಗುವುದರಿಂದ ಅನೇಕ ವಿದ್ಯಾರ್ಥಿಗಳಿಗೆ ತೊಂದರೆ ಆಗುವುದನ್ನು ತಪ್ಪಿಸಲು ರಾಜ್ಯ ಸರಕಾರ ಬಿ.ಎಡ್ ಪ್ರವೇಶ ದಿನಾಂಕ ವಿಸ್ತರಿಸಿದೆ ಎಂದರು.

ಬಿ.ಎಡ್. ಕೋರ್ಸ್ ಪದವಿ ಪ್ರವೇಶ ನೋಂದಣಿ ಅವಧಿಯನ್ನು ಡಿ.11 ರ ವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...