
ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಜೂನ್ 13ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇಂದು ಅಂತಿಮ ದಿನವಾಗಿದೆ. ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ಏಳು ಸ್ಥಾನಗಳನ್ನು ನಿರಾಯಾಸವಾಗಿ ಗೆಲ್ಲಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸಚಿವ ಬೋಸರಾಜು, ಜಗದೇವ ಗುತ್ತೇದಾರ್, ಕೆ. ಗೋವಿಂದರಾಜ್, ಎ. ವಸಂತಕುಮಾರ್, ಬಿಲ್ಕಿಸ್ ಬಾನು, ಐವನ್ ಡಿಸೋಜ ಅಭ್ಯರ್ಥಿಗಳಾಗಿದ್ದು, ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಹೆಸರನ್ನು ಘೋಷಿಸಲಾಗಿದೆ.
ತಮ್ಮ ಪಕ್ಷದ ವಿಧಾನ ಪರಿಷತ್ ಅಭ್ಯರ್ಥಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಬಿ ಫಾರಂ ವಿತರಿಸಿದ್ದು, ಶುಭ ಹಾರೈಸಿದ್ದಾರೆ.
