ಬೆಂಗಳೂರು: ಗೋಧ್ರಾ ರೀತಿ ಘಟನೆ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಅವರ ವಿಚಾರಣೆ ನಡೆಸುವಂತೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಸಿಬಿ ವಿಚಾರಣೆ ನಡೆಸಿದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿ.ಕೆ.ಹರಿಪ್ರಸಾದ್, ಇದು ಕಾಂಗ್ರೆಸ್ ಸರ್ಕಾರವೇ? ಅಥವಾ ಆರ್.ಎಸ್.ಎಸ್ ಸರ್ಕಾರವೇ? ಎಂದು ಪ್ರಶ್ನಿಸಿದ್ದಾರೆ.
ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ. ಮಂಪರು ಪರೀಕ್ಷೆ ಮಾಡಿಬಿಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ನನ್ನ ಜೊತೆ ವಿಜಯೇಂದ್ರ ಅವರನ್ನೂ ಮಂಪರು ಪರೀಕ್ಷೆಗೆ ಒಳಪಡಿಸಲಿ. ನನ್ನ ಪರಿಸ್ಥಿತಿಯೇ ಹೀಗಾದರೆ ಇನ್ನು ಕಾರ್ಯಕರ್ತರ ಕಥೆ ಏನು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಗೆ ಯಾವುದೆ ಕ್ರಮ ಕೈಗೊಂಡಿಲ್ಲ. ನನ್ನನ್ನು ವಿಚಾರಣೆ ನಡೆಸಿದ್ದಾರೆ. ಇವರ ಬೆದರಿಕೆಗೆ ಬಗ್ಗಲ್ಲ. ರಾಮ ಮಂದಿರಕ್ಕೆ ಹೋಗುವವರಿಗೆ ಸೂಕ್ತ ರಕ್ಷಣೆ ನೀಡಿ ಎಂದು ನಾನು ಹೇಳಿದ್ದು. ಅಂದು ನಾನು ಹೇಳಿದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ಹೇಳಿದರು.