alex Certify BIG NEWS: ಬಿ.ಕೆ.ಹರಿಪ್ರಸಾದ್ ಮನವೊಲಿಕೆಗೆ ಕಾಂಗ್ರೆಸ್ ನಾಯಕರ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ಕೆ.ಹರಿಪ್ರಸಾದ್ ಮನವೊಲಿಕೆಗೆ ಕಾಂಗ್ರೆಸ್ ನಾಯಕರ ಯತ್ನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ, ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪರೋಕ್ಷ ವಾಗ್ದಾಳಿ ವಿಚಾರವಾಗಿ ಸರ್ಕಾರಕ್ಕೆ ಮುಜುಗರ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಬಿ.ಕೆ.ಹರಿಪ್ರಸಾದ್ ಮನವೊಲಿಕೆಗೆ ಮುಂದಾಗಿದ್ದಾರೆ.

ಇಂದು ಸಂಜೆ 6 ಗಂಟೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್ ನಾಯಕರು ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಹರಿಪ್ರಸಾದ್ ಭೇಟಿಗೂ ಮುನ್ನ ಸತೀಶ್ ಜರಕಿಹೊಳಿ ಹಾಗೂ ಡಾ.ಜಿ.ಪರಮೇಶ್ವರ್ ಚರ್ಚೆ ನಡೆಸಿದ್ದಾರೆ. ಊಟದ ನೆಪದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...