ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರಪ್ರದೇಶದ ಮಥುರಾ ಜಿಲ್ಲೆಯ ಇಬ್ರಾಹಿಂ ಮತ್ತು ಶೋಕಿನ್ ಬಂಧಿತ ಆರೋಪಿಗಳಾಗಿದ್ದಾರೆ. ಕೇಂದ್ರ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 5 ಮೊಬೈಲ್, 10 ಕ್ಕೂ ಹೆಚ್ಚು ಸಿಮ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಗಳನ್ನು ಜಪ್ತಿ ಮಾಡಲಾಗಿದೆ.
ಬಿ.ಎಲ್. ಸಂತೋಷ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಓಪನ್ ಮಾಡಿ ಬಳಿಕ ಮೆಸೆಂಜರ್ ನಲ್ಲಿ ಹಣ ಕಳುಹಿಸುವಂತೆ ತಿಳಿಸಿದ್ದರು. ಅಜಿತ್ ಎಂಬುವರಿಗೆ ಮೆಸೇಜ್ ಮಾಡಿದ್ದು, ಸಂತೋಷ್ ಅವರೇ ಹಣ ಕೇಳಿದ್ದಾರೆ ಎಂದು ಭಾವಿಸಿದ್ದ ಅಜಿತ್ ಹಣ ಸಂದಾಯ ಮಾಡಿದ್ದರು. ಬಳಿಕ ವಂಚನೆ ಗೊತ್ತಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು.