alex Certify ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರಲ್ಲಿ ನಕಲಿ ಖಾತೆ ತೆರೆದು ಹಣ ವಸೂಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರಲ್ಲಿ ನಕಲಿ ಖಾತೆ ತೆರೆದು ಹಣ ವಸೂಲಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ವ್ಯಕ್ತಿಯೊಬ್ಬರಿಂದ 15 ಸಾವಿರ ರೂಪಾಯಿ ವಸೂಲಿ ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತನಿಂದ 15 ಸಾವಿರ ರೂಪಾಯಿ ವಸೂಲಿ ಮಾಡಿರುವ ಕುರಿತು ಕೇಂದ್ರ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಲಾಗಿದೆ. ಬಿಜೆಪಿ ಸಾಮಾಜಿಕ ಜಾಲತಾಣ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ವಿನೋದ್ ಕೃಷ್ಣಮೂರ್ತಿ ದೂರು ನೀಡಿದ್ದಾರೆ.

ಬಿ.ಎಲ್. ಸಂತೋಷ್ ಅವರ ಹೆಸರಲ್ಲಿ ನವೆಂಬರ್ 11 ರಂದು ನಕಲಿ ಫೇಸ್ ಬುಕ್ ಖಾತೆ ತೆರೆದು ಪರಿಚಯಸ್ಥರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗಿದೆ. ಬಳಿಕ ಬಿಜೆಪಿ ಕಾರ್ಯಕರ್ತ ಅಜಿತ್ ಶೆಟ್ಟಿ ಎಂಬವರಿಗೆ 15 ಸಾವಿರ ರೂ. ಕೊಡುವಂತೆ ಸಂದೇಶ ಕಳಿಸಿದ್ದು, ಸಂತೋಷ್ ಅವರೇ ಹಣ ಕೇಳಿದ್ದಾರೆ ಎಂದು ತಿಳಿದ ಅಜಿತ್ 15 ಸಾವಿರ ರೂ. ವರ್ಗಾವಣೆ ಮಾಡಿದ್ದಾರೆ. ಇದು ವಂಚನೆ ಎನ್ನುವುದು ಗೊತ್ತಾಗುತ್ತಿದ್ದಂತೆ ಮಾಹಿತಿ ಪಡೆದು ದೂರು ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...