
ಬಳ್ಳಾರಿ: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರಿಗೆ ಶನಿವಾರ ಸಂಜೆ ನಾಲ್ವರು ದುಷ್ಕರ್ಮಿಗಳು ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಆರೋಪಿಗಳನ್ನು ಹಿಡಿದು ಥಳಿಸಿ ಕೌಲ್ ಬಜಾರ್ ಠಾಣೆಗೆ ಒಪ್ಪಿಸಲಾಗಿದೆ.
ಚುನಾವಣೆಯಲ್ಲಿ ಜಯಗಳಿಸಿದ ನಂತರ ಶಾಸಕ ಬಿ. ನಾಗೇಂದ್ರ ಬೆಂಬಲಿಗರೊಂದಿಗೆ ರ್ಯಾಲಿ ನಡೆಸುವ ವೇಳೆ ಘಟನೆ ನಡೆದಿದೆ. ನಾಲ್ವರು ಶಾಸಕರನ್ನು ಮಾತನಾಡಿಸುವ ನೆಪದಲ್ಲಿ ಸಮೀಪಕ್ಕೆ ಬಂದಿದ್ದಾರೆ. ಅವರ ಬಳಿ ಮಾರಕಸ್ತ್ರಗಳಿವೆ ಎನ್ನುವುದು ತಿಳಿಯುತ್ತಿದ್ದಂತೆ ಅಲ್ಲಿಯೇ ಇದ್ದ ಭದ್ರತಾ ಸಿಬ್ಬಂದಿ ಅವರನ್ನು ಹಿಡಿದು ಥಳಿಸಿದ್ದಾರೆ. ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.