ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದಾರೆ.
ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ನಾಗೇಂದ್ರ ಅವರನ್ನು ಕರೆತಂದು ಜಡ್ಜ್ ಮುಂದೆ ಹಾಜರುಪಡಿಸಲಾಗಿದೆ. ಅವರನ್ನು ವಿಚಾರಣೆಗಾಗಿ ಇಡಿ ಕಸ್ಟಡಿಗೆ ಪಡೆದುಕೊಳ್ಳಲಿದೆ.