alex Certify ನಾಗೇಂದ್ರ ರಾಜೀನಾಮೆಗೆ ಗಡುವು ನೀಡಿದ ಬಿಜೆಪಿ: ಸಹೋದ್ಯೋಗಿ ಪರ ನಿಂತ ಸಚಿವರ ದಂಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಗೇಂದ್ರ ರಾಜೀನಾಮೆಗೆ ಗಡುವು ನೀಡಿದ ಬಿಜೆಪಿ: ಸಹೋದ್ಯೋಗಿ ಪರ ನಿಂತ ಸಚಿವರ ದಂಡು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣ ಹಿನ್ನೆಲೆಯಲ್ಲಿ ಬಿಜೆಪಿ ಹೋರಾಟ ಆರಂಭಿಸಿದೆ.

ಸಚಿವ ಬಿ. ನಾಗೇಂದ್ರ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಕೈಗೊಂಡಿರುವ ಬಿಜೆಪಿ ಸಚಿವ ನಾಗೇಂದ್ರ ರಾಜೀನಾಮೆಗೆ ಜೂನ್ 6ರ ಗಡುವು ನೀಡಿದೆ. ದಲಿತರ ಹಣ ನುಂಗಿದ ಕಾಂಗ್ರೆಸ್ ಆರೋಪದಡಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ. ಈ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಂಪುಟ ಸದಸ್ಯರು ಸಚಿವ ನಾಗೇಂದ್ರ ಬೆಂಬಲಕ್ಕೆ ನಿಂತಿದ್ದಾರೆ.

ಹಗರಣದ ತನಿಖಾ ವರದಿ ಬರುವವರೆಗೆ ನಾಗೇಂದ್ರ ಅವರ ರಾಜೀನಾಮೆ ಕುರಿತಾಗಿ ಯಾವುದೇ ನಿರ್ಧಾರ ಕೈಗೊಳ್ಳದಿರಲು ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಅವಕಾಶವನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿರುವ ಬಿಜೆಪಿ ಪ್ರಬಲ ಹೋರಾಟ ನಡೆಸಲು ಸಜ್ಜಾಗಿದೆ.

ಈ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೇರಿದಂತೆ ಹಲವು ಸಚಿವರು ನಾಗೇಂದ್ರ ಪರ ಬ್ಯಾಟಿಂಗ್ ನಡೆಸಿದ್ದಾರೆ. ಪ್ರಕರಣದಲ್ಲಿ ಸಚಿವರ ಪಾತ್ರವಿದೆ ಎಂಬುದಕ್ಕೆ ಪುರಾವೆಗಳು ಬೇಕಲ್ಲವೇ? ಡೆತ್ ನೋಟ್ ನಲ್ಲಿ ಸಚಿವರು ಮೌಖಿಕ ಆದೇಶ ನೀಡಿದ್ದಾರೆ ಎಂಬ ಅಂಶವಿದೆ. ಈಶ್ವರಪ್ಪ ಪ್ರಕರಣವನ್ನು ಈ ಪ್ರಕರಣಕ್ಕೆ ಹೋಲಿಸುವುದು ಸರಿಯಲ್ಲ. ಆ ಪ್ರಕರಣದಲ್ಲಿ ಈಶ್ವರಪ್ಪನವರ ಹೆಸರಿತ್ತು. ಈ ಪ್ರಕರಣದಲ್ಲಿ ನಾಗೇಂದ್ರ ಹೆಸರಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

ಡೆತ್ ನೋಟ್ ನಲ್ಲಿ ಸಚಿವರ ಮೌಖಿಕ ಆದೇಶದ ಬಗ್ಗೆ ಎಂದಿದೆ. ಆದರೆ ನಾಗೇಂದ್ರ ವಿರುದ್ಧ ನೇರ ಆರೋಪಗಳಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...