
ದಾವಣಗೆರೆ: ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿದೆ. ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಲಕ್ಷಣಗಳು ಕಾಣುತ್ತಿವೆ ಎಂದು ಬಿಜೆಪಿ ಶಾಸಕ ಬಿ.ಪಿ.ಹರೀಶ್ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಪಿ.ಹರೀಶ್, ಬದಲಾವಣೆ ಭಯ ಇರುವ ಕಾರಣಕ್ಕೆ ಲಿಂಗಾಯಿತ ಸಮಾವೇಶ ಮಾಡುತ್ತಿದ್ದಾರೆ. ಇದೆಲ್ಲವೂ ಯಡಿಯೂರಪ್ಪ ಹಾಗೂ ಅವರ ಮಕ್ಕಳ ಹಳೆಯ ಆಟಗಳು ಎಂದು ವಾಗ್ದಾಳಿ ನಡೆಸಿದ್ದಾರೆ.
ಯಡಿಯೂರಪ್ಪ ಅವರನ್ನು ಕುರ್ಚಿಯಿಂದ ಇಳಿಸುವಾಗ ಲಿಂಗಾಯಿತ ಸ್ವಾಮೀಜಿಗಳನ್ನು ಇಟ್ಟುಕೊಂಡು ಆಟವಾಡುತ್ತಿದ್ದರು. ಈಗ ಲಿಂಗಾಯಿತ ಸಮಾವೇಶ ಮಾಡುತ್ತಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಆಗಲೇಬೇಕು. ಅಲ್ಲದೇ ಪಕ್ಷ ವಿರೋಧಿಗಳು ಹಾಗೂ ಮ್ಯಾಚ್ ಫಿಕ್ಸರ್ ಗಳಿಗೆ ಪಾಠ ಕಲಿಸಬೇಕು ಎಂದು ಕಿಡಿಕಾರಿದರು.