ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ ಅವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಉತ್ತಮ ನಾಯಕರಾಗಿದ್ದಾರೆ. ಸಮಾಜದ ಪ್ರತಿ ಸಮುದಾಯದ ಅಭಿವೃದ್ಧಿಗೆ ಕ್ರಮಕೈಗೊಂಡಿದ್ದಾರೆ. ಅವರ ನಾಯಕತ್ವದಲ್ಲಿಯೇ ಒಗ್ಗಟ್ಟಿನಿಂದ ಸರ್ಕಾರ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ವಿಷಯವೇ ಅಪ್ರಸ್ತುತ ಎಂದು ಅವರು ಹೇಳಿದ್ದಾರೆ.
ಪೂರ್ಣಾವಧಿಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುತ್ತಾರೆ. ಅವರ ವಿರುದ್ಧ ಯಾರೂ ದೂರು ನೀಡಿಲ್ಲ. ಅನಗತ್ಯವಾಗಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆಯಾಗುತ್ತಿದೆ ಎಂದು ತಿಳಿಸಿದ್ದಾರೆ.