ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಂಝೆ 6.30 ರಿಂದ ರಾತ್ರಿ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮೇಕೆದಾಟು ಜಲಾಶಯ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ.
ಈಗಾಗಲೇ ಅಧಿಕಾರಿಗಳು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸಿಎಮ ಚರ್ಚಿಸಲಿದ್ದಾರೆ. ರಾಜ್ಯದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ, ಡಿಸಿಎಂ ಗೋವಿಂದ ಕಾರಜೋಳ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ದೆಹಲಿಗೆ ತೆರಳುವ ಸಾಧ್ಯತೆ ಇದೆ.
ದೆಹಲಿ ಭೇಟಿ ವೇಳೆ ಸಿಎಂ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರನ್ನು ಕೂಡ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.