ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನವದೆಹಲಿಗೆ ತೆರಳಲಿದ್ದಾರೆ. ಯಡಿಯೂರಪ್ಪನವರ ದೆಹಲಿ ಭೇಟಿ ಕುತೂಹಲ ಕೆರಳಿಸಿದೆ.
ಸಂಸದೀಯ ಮಂಡಳಿ, ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಸ್ಥಾನ ದೊರೆತ ಬಳಿಕ ಇದೇ ಮೊದಲ ಬಾರಿಗೆ ಅವರು ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ದೆಹಲಿ ಭೇಟಿ ವೇಳೆ ಪಕ್ಷದ ವರಿಷ್ಠರನ್ನು ಯಡಿಯೂರಪ್ಪ ಭೇಟಿಯಾಗಲಿದ್ದು, ಅವಕಾಶ ದೊರೆತಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಕೇಂದ್ರ ಸಚಿವರನ್ನೂ ಕೂಡ ಯಡಿಯೂರಪ್ಪ ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ, ಸಚಿವ ಸಂಪುಟ ವಿಸ್ತರಣೆ, ಪಕ್ಷ ಸಂಘಟನೆ ಮೊದಲಾದ ವಿಚಾರಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.