alex Certify BIG NEWS: ವಿಶೇಷ ವಿಮಾನದಲ್ಲಿ ದಿಢೀರ್ ದೆಹಲಿಗೆ ಸಿಎಂ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಭೇಟಿ –ಚರ್ಚೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಶೇಷ ವಿಮಾನದಲ್ಲಿ ದಿಢೀರ್ ದೆಹಲಿಗೆ ಸಿಎಂ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಭೇಟಿ –ಚರ್ಚೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಂಝೆ 6.30 ರಿಂದ ರಾತ್ರಿ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮೇಕೆದಾಟು ಜಲಾಶಯ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ.

ಈಗಾಗಲೇ ಅಧಿಕಾರಿಗಳು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸಿಎಮ ಚರ್ಚಿಸಲಿದ್ದಾರೆ. ರಾಜ್ಯದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ, ಡಿಸಿಎಂ ಗೋವಿಂದ ಕಾರಜೋಳ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ದೆಹಲಿಗೆ ತೆರಳುವ ಸಾಧ್ಯತೆ ಇದೆ.

ದೆಹಲಿ ಭೇಟಿ ವೇಳೆ ಸಿಎಂ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರನ್ನು ಕೂಡ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...