ವಿಜಯಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸರ್ಕಾರ ದಿವಾಳಿಯಾಗಿದೆ ಎಂದು ಕಿಡಿಕಾರಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಸರ್ಕಾರ ಎಲ್ಲಾ ಯೋಜನೆಗಳನ್ನು ನಿಲ್ಲಿಸಿ ಕೇವಲ ಪ್ರಚಾರ ಮಾಡುತ್ತಿದೆ. ಸರ್ಕಾರ ಪಾಪರ್ ಆಗಿದೆ ಎಂದರು.
ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಯೋಜನೆಗಳನ್ನು ನಿಲ್ಲಿಸಿದ್ದಾರೆ. ಕಿಸಾನ್ ಸಮ್ಮಾನ್, ಭಾಗ್ಯಲಕ್ಷ್ಮೀ ಯೋಜನೆ ಯಾಕೆ ನೀಡುತ್ತಿಲ್ಲ. ಗ್ಯಾರಂಟಿ ಯೋಜನೆ ಹೆಸರಲ್ಲಿ ಕೇವಲ ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಬದಲಾವಣೆ ತರುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಅಂಬೇಡ್ಕರ್ ಹೆಸರು ಹೇಳುವ ನೈಕತೆ ಕಾಂಗ್ರೆಸ್ ನವರಿಗೆ ಇಲ್ಲ ಎಂದು ಕಿಡಿಕಾರಿದರು.