ಕೋಲಾರ: ರಾಜ್ಯದಲ್ಲಿ ಭೀಕರ ಬರಗಾಲ ಶುರುವಾಗಿದೆ. ಆದರೆ ಸರ್ಕರ ಮಾತ್ರ ಇನ್ನೂ ಎಚ್ಚುತ್ತುಕೊಂಡಿಲ್ಲ. ಎಚ್ಚರಿಸಬೇಕಾದ ಸ್ಥಿತಿ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಹಬ್ಬದ ಬಳಿಕ ರಾಜ್ಯದ ಎಲ್ಲಾ ಮುಖಂಡರ ಜೊತೆ ಪ್ರತಿ ಜಿಲ್ಲೆಗೆ ಪ್ರವಾಸ ಮಾಡುತ್ತೇನೆ. ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸುತ್ತೇವೆ. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಜನರಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ತಿಳಿಸಿ ಪಕ್ಷ ಬಲಪಡಿಸುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ಭೀಕರ ಬರ ಶುರುವಾಗಿದೆ. ನೀರಿಗೂ ಹಾಹಾಕಾರ ಇದೆ. ಆದರೂ ರಾಜ್ಯ ಸರ್ಕಾರ ಮಾತ್ರ ಕುಂಭಕರ್ಣನ ನಿದ್ದೆಯಲ್ಲಿದೆ. ಕಾಂಗ್ರೆಸ್ ಸರ್ಕಾರ ಬದುಕಿದ್ದೂ ಸತ್ತಂತಾಗಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ 1 ಕಿ.ಮೀ ಸಹ ರಸ್ತೆಯಾಗಿಲ್ಲ ಎಂದು ಕಿಡಿಕಾರಿದರು.