ಬೆಂಗಳೂರು : ಕೆಎಮ್ಎಫ್ (KMF) ನೂತನ ಎಂಡಿಯಾಗಿ ಬಿ.ಶಿವಸ್ವಾಮಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿ ಶಿವಸ್ವಾಮಿ, ಕೆ.ಎ.ಎಸ್ (ಸೂಪರ್ ಟೈಂ ಸೈಲ್) ಅಧಿಕಾರಿ, ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ, ವಿಧಾನ ಸೌಧ, ಬೆಂಗಳೂರು ಇವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಹಾಲು ಮಹಾಮಂಡಳಿ (KMF), ಬೆಂಗಳೂರು- ಶ್ರೀ ಎಂ.ಕೆ ಜಗದೀಶ್ ಇವರ ಸ್ನಾನಕ್ಕೆ ವರ್ಗಾಯಿಸಿ ಆದೇಶಿಸಿದೆ.
ಎಂ.ಕೆ ಜಗದೀಶ್ ಇವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಆಸು ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.