
ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಆಪರೇಷನ್ ಹಸ್ತದ ವಿಚಾರವಾಗಿ ಭಾರಿ ಚರ್ಚೆಗಳು ನಡೆದಿರುವ ಸಂದರ್ಭದಲ್ಲೇ ಮಾಜಿ ಸಚಿವ ಶ್ರೀರಾಮುಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಮಾಜಿ ಸಚಿವ ಶ್ರೀರಾಮುಲು, ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಆದರೆ ಶ್ರೀರಾಮುಲು ಡಿಸಿಎಂ ಭೇಟಿಯಾಗಿದ್ದು ರಾಜಕೀಯ ಕಾರಣಗಳಿಗಲ್ಲ ಎಂದು ತಿಳಿದುಬಂದಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಮಾಜಿ ಸಚಿವ ಬಿ.ಶ್ರೀರಾಮುಲು ತಮ್ಮ ಪುತ್ರಿಯ ವಿವಾಹ ಕಾರ್ಯಕ್ರಮದ ಆಮಂತ್ರಣ ನೀಡಿ ಉಪಮುಖ್ಯಮಂತ್ರಿಗಳನ್ನು ಮದುವೆಗೆ ಆಹ್ವಾನಿಸಿದ್ದಾರೆ.