ಬೆಂಗಳೂರು: ಡೀಸೆಲ್ ದರ, ಕೊರೋನಾದಿಂದ ಆರ್ಥಿಕ ನಷ್ಟ, ಬಿಡಭಾಗಗಳ ದರ ಹೆಚ್ಚಳವಾಗಿದ್ದರಿಂದ ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ಪ್ರಯಾಣ ದರ ಏರಿಕೆ ಮಾಡದಿರಲು ಸರ್ಕಾರ ನಿರ್ಧರಿಸಿದೆ.
ಸದ್ಯಕ್ಕೆ ಬಸ್ ದರ ಹೆಚ್ಚಳ ಮಾಡಿ ಜನರಿಗೆ ಮಾಡುವುದಿಲ್ಲವೆಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಇಲಾಖೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಲಾಭದತ್ತ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸಾರಿಗೆ ಇಲಾಖೆ ಈ ಸಾಲಿನಲ್ಲಿ 510.24 ಕೋಟಿ ರೂಪಾಯಿ ನಷ್ಟದಲ್ಲಿದೆ. ರಾಜ್ಯದ ಸುಮಾರು ಶೇಕಡ 70 ರಷ್ಟು ಜನ ಬಸ್ ಗಳ ಮೇಲೆ ಅವಲಂಬಿತರಾಗಿದ್ದಾರೆ. ಪ್ರಯಾಣ ದರ ಹೆಚ್ಚಳ ಮಾಡಿ ಜನರಿಗೆ ಹೊರೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.