alex Certify KSRTC ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಮುಷ್ಕರ ನಡೆಸಿದ ನೌಕರರು ಕೆಲಸಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಮುಷ್ಕರ ನಡೆಸಿದ ನೌಕರರು ಕೆಲಸಕ್ಕೆ

ಬೆಂಗಳೂರು: ದರ ಹೆಚ್ಚಳ ಮಾಡಿದರೆ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಈ ಕಾರಣದಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ bi. ಶ್ರೀರಾಮುಲು ತಿಳಿಸಿದ್ದಾರೆ.

ಡೀಸೆಲ್ ಬೆಲೆ ಹೆಚ್ಚಳವಾಗಿದ್ದರೂ ಅದನ್ನು ಸರಿದೂಗಿಸಲು ಪ್ರಯಾಣದರ ಹೆಚ್ಚಳ ಮಾಡಬೇಕೆಂಬ ಪ್ರಸ್ತಾವನೆ ಸದ್ಯಕ್ಕೆ ಇಲ್ಲವೆಂದು ಅವರು ತಿಳಿಸಿದ್ದಾರೆ. ಎಲೆಕ್ಟ್ರಿಕ್ ಬಸ್ಸುಗಳನ್ನು ಓಡಿಸಲು ಮತ್ತಷ್ಟು ಯೋಜನೆ ರೂಪಿಸಿ ಟೆಂಡರ್ ಕರೆಯಲಾಗಿದೆ. ಇದಕ್ಕಾಗಿ ಕೇಂದ್ರದ ಅನುದಾನ ದೊರೆಯಲಿದ್ದು, ಆರಂಭಿಕ ಹಂತದಲ್ಲೇ 700 ಬಸ್ ಗಳನ್ನು ಖರೀದಿ ಮಾಡಲಾಗುವುದು. ಮುಷ್ಕರದಲ್ಲಿ ಭಾಗಿಯಾಗಿ ಅಮಾನತುಗೊಂಡ ನೌಕರರನ್ನು ಕೆಲಸಕ್ಕೆ ಸೇರಿಸಿಕೊಳ್ಳಲಿದ್ದು, ಅವರ ವಿರುದ್ಧದ ಪ್ರಕರಣಗಳನ್ನು ವಜಾ ಮಾಡುವುದು ಎಂದು ತಿಳಿಸಿದ್ದಾರೆ.

ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಇಲಾಖೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಲಾಭದತ್ತ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ. ಸಾರಿಗೆ ಇಲಾಖೆ ಈ ಸಾಲಿನಲ್ಲಿ 510.24 ಕೋಟಿ ರೂಪಾಯಿ ನಷ್ಟದಲ್ಲಿದೆ. ರಾಜ್ಯದ ಸುಮಾರು ಶೇಕಡ 70 ರಷ್ಟು ಜನ ಬಸ್ ಗಳ ಮೇಲೆ ಅವಲಂಬಿತರಾಗಿದ್ದಾರೆ. ಪ್ರಯಾಣ ದರ ಹೆಚ್ಚಳ ಮಾಡಿ ಜನರಿಗೆ ಹೊರೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...