ಬೆಂಗಳೂರು: ದ್ವೇಷದ ಪೋಸ್ಟ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಬಿ.ವೈ.ವಿಜಯೇಂದ್ರ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಎಫ್ಐಆರ್ ಗೆ ತಡೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ.
ಮೀಸಲಾತಿಗೆ ಸಂಬಂಧಿಸಿದಂತೆ ವಿಡಿಯೋ ತುಣುಕೊಂದನ್ನು ಬಿಜೆಪಿ ರಾಜ್ಯ ಘಟಕ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿತ್ತು. ದ್ವೇಷ ಸೃಷ್ಟಿಸಲು ಯತ್ನ ಎಂಬ ಆರೋಪದಲ್ಲಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.