ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಅಖಾಡ ರಂಗೇರಿದೆ. ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಇಂದು ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.
ಬಿರು ಬಿಸಿಲು ಲೆಕ್ಕಿಸದೇ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಬಿ.ವೈ ರಾಘವೇಂದ್ರಗೆ ಮೆರವಣಿಗೆ ಉದ್ದಕ್ಕೂ ಭಾರಿ ಜನಸ್ತೋಮ ಬೆಂಬಲ ನೀಡಿತು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಬಿ.ವೈ.ರಾಘವೇದ್ರ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಹೆಚ್.ಡಿ.ಕುಮಾರಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಬಿಸಿಲನ್ನೂ ಲೆಕ್ಕಿಸದೇ ಹರಿದು ಬಂದ ಜನಸಾಗರ ಶಿವಮೊಗ್ಗದಿಂದ ಈ ಬಾರಿಯೂ ನಾನು ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸ ಮೂಡಿಸಿದೆ. ಎಲ್ಲೆಡೆ ಮೋದಿ ಪರವಾದ ಅಲೆ ಎಂದು ಹೇಳಿದರು.