ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಾಸ್ ಪಡೆಯುವ ಬಗ್ಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನಿರ್ಧಾರ ಕಾನೂನು ಬಾಹಿರ ಎಂದು ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ರಾಘವೇಂದ್ರ, ಹೈಕೋರ್ಟ್ ನಲ್ಲಿ ಇನ್ನೂ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಆದಾಗ್ಯೂ ಸಂಪುಟ ಸಭೆಯಲ್ಲಿ ಸಿಬಿಐ ಕೇಸ್ ವಾಪಾಸ್ ಪಡೆಯುವ ತೀರ್ಮಾನ ಸರಿಯಲ್ಲ ಎಂದರು.
ಪ್ರಕರಣವನ್ನು ರಾಜಕೀಯಗೊಳಿಸುವ ಯತ್ನ ಪಡೆಸುತ್ತಿದ್ದಾರೆ. ಸಂವಿಧಾನಬದ್ಧ ಸಂಸ್ಥೆಯನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. ರಾಜ್ಯಕ್ಕೆ ಇದೊಂದು ಕೆಟ್ಟ ಸಂದೇಶ ರವಾನೆಯಾಗಿದೆ. ಇದನ್ನು ಸಮಾಜ ಹಾಗೂ ನ್ಯಾಯಾಂಗ ಗಮನಿಸುತ್ತಿದೆ. ಪ್ರತಿರೋಧ ಬರುವ ತೀರ್ಪು ಬಂದರೂ ಅಚ್ಚರಿಪಡಬೇಕಿಲ್ಲ. ಅವರ ತಪ್ಪನ್ನು ಮುಚ್ಚಿಕೊಳ್ಳಲು ಹೊರಟಿದ್ದಾರೆ ಎಂದು ಕಿಡಿಕಾರಿದರು.