alex Certify ಹೈಕಮಾಂಡ್ ಗೆ ಪತ್ರ ಬರೆದ ಯತ್ನಾಳ್ ಗೆ ವಿಜಯೇಂದ್ರ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈಕಮಾಂಡ್ ಗೆ ಪತ್ರ ಬರೆದ ಯತ್ನಾಳ್ ಗೆ ವಿಜಯೇಂದ್ರ ಟಾಂಗ್

ಕೊಪ್ಪಳ: ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ನನ್ನ ಮೇಲೆ ಬಹಳ ಪ್ರೀತಿ ಇದೆ. ಅವರು ಬಹಳ ಹಿರಿಯರಿದ್ದಾರೆ. ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ವಿಜಯೇಂದ್ರ ಕುಟುಂಬದ ಬಗ್ಗೆ ವರಿಷ್ಠರಿಗೆ ಬಿಜೆಪಿ ಶಾಸಕ ಯತ್ನಾಳ್ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿ, ತುಂಬಾ ಸಂತೋಷ. ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ಕೊಪ್ಪಳ ತಾಲೂಕಿನ ಹುಲಗಿಯಲ್ಲಿ ಹೇಳಿದ್ದಾರೆ.

ಮೀಸಲಾತಿಗೆ ವಿವಿಧ ಸಮುದಾಯಗಳ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಸಿಎಂ ಮತ್ತು ಬಿಜೆಪಿ ನಾಯಕರು ಹೋರಾಟವನ್ನು ವಿರೋಧಿಸಿಲ್ಲ. ಕಾನೂನಾತ್ಮಕವಾಗಿ ಏನು ಪರಿಹಾರ ಕೊಡಬೇಕು ಅದನ್ನು ಕೊಡುತ್ತಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರಿಹಾರ ನೀಡುತ್ತಾರೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...