ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿಯಾಗುವವರೆಗೂ ನಾವು ಅವರ ಶಕ್ತಿಯಾಗಿ ಇರುತ್ತೇವೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ, ಬಿ.ವೈ.ವಿಜಯೇಂದ್ರ ಅವರನ್ನು ನಾವು ಮುಖ್ಯಮಂತ್ರಿಯನ್ನಾಗಿ ಮಾಡಿಯೇ ಮಾಡುತ್ತೇವೆ. ವಿಜಯೇಂದ್ರ ಮೀನಿನ ಮರಿಯಂತೆ, ಅವರಿಗೆ ಈಜಲು ಕಲಿಸುವ ಅವಶ್ಯಕತೆ ಇಲ್ಲ. ಯಡಿಯೂರಪ್ಪ ಅವರಿಗಿಂತ ಒಂದು ಹೆಜ್ಜೆ ಅವರು ಮುಂದಿರುತ್ತಾರೆ ಎಂದು ಶ್ಲಾಘಿಸಿದ್ದಾರೆ.
ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಬಿ.ವೈ.ವಿಜಯೇಂದ್ರ ಬಾಗಲಕೋಟೆಗೆ ಭೇಟಿ ನೀಡಿದ್ದು, ಕಾರ್ಯಕರ್ತರಲ್ಲಿ ಹುರುಪು ಮೂಡಿದೆ. ವಿಜಯೇಂದ್ರ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಯೇ ಮಾಡುತ್ತೇವೆ ಎಂದು ಕಾರಜೋಳ ಹೇಳಿದ್ದಾರೆ.