BIG NEWS: ರಾಜ್ಯದಲ್ಲಿ ಕೇರಳ ಮಾದರಿಯಲ್ಲಿ ಲವ್ ಜಿಹಾದ್ ಶುರುವಾಗಿದೆ; ಭಯದ ವಾತಾವರಣವಿದೆ; ಬಿ.ವೈ.ವಿಜಯೇಂದ್ರ ಆರೋಪ

ಹುಬ್ಬಳ್ಳಿ: ರಾಜ್ಯದಲ್ಲಿ ಕೇರಳ ಮಾದರಿಯಲ್ಲಿ ಲವ್ ಜಿಹಾದ್ ನಡೆಯುತ್ತಿದೆ. ಹಿಂದೂ ಹೆಣ್ಣುಮಕ್ಕಳ ಕುಟುಂಬದಲ್ಲಿ ಆತಂಕವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ನೇಹಾ ಹತ್ಯೆ ಪ್ರಕರಣದ ಬಳಿಕ ಹುಬ್ಬಳ್ಳಿಯಲ್ಲಿ ಮತ್ತೊಂದು ಪ್ರಕರಣ ನಡೆದಿದೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಸದ್ದಾಂ ಹುಸೇನ್ ಎಂಬಾತ ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ್ದಾನೆ. ಆರೋಪಿ ಸದ್ದಾಂ ಹುಸೇನ್ ಕಬ್ಬಿಣದ ರಾಡ್ ತೆಗೆದುಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ. ಇದು ರಾಜ್ಯ ಸರ್ಕಾರ ತಲೆ ತಗ್ಗಿಸುವ ಕೆಲಸ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನರೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡಿದ ವಿಜಯೇಂದ್ರ, ನಾವ್ಯಾರೂ ಪ್ರಜ್ವಲ್ ರೇವಣ್ಣ ಪ್ರಕರಣ ಬೆಂಬಲಿಸಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಪೆನ್ ಡ್ರೈವ್ ಬಗ್ಗೆ ವಿಜಯೇಂದ್ರಗೆ ಮೊದಲೇ ಪತ್ರ ಬರೆಯಲಾಗಿದೆ ಎನ್ನುತ್ತಿದ್ದಾರೆ. ನನಗಂತೂ ಈ ಕ್ಷಣದವರೆಗೂ ಯಾವುದೇ ಪತ್ರ ಬಂದಿಲ್ಲ. ಬಹಳ ಜವಾಬ್ದಾರಿಯಿಂದ ಈ ಮಾತು ಹೇಳುತ್ತಿದ್ದೇನೆ. ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಬಗ್ಗೆ ವಿಶ್ವಾಸ ಹೋಗಿದೆ. ಅದಕ್ಕೆ ಪೆನ್ ಡ್ರೈವ್ ಹಿಂದೆ ಬಿದ್ದಿದ್ದಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read